rtgh

ನಕಲಿ ವೈದ್ಯರಿಗೆ ಹೊಸ ಗಂಡಾಂತರ.!! ಸರ್ಕಾರದಿಂದ ಬಂತು ಖಡಕ್‌ ವಾರ್ನಿಂಗ್

ಹಲೋ ಸ್ನೇಹಿತರೇ, “ಅರ್ಹತೆ ಇಲ್ಲದಿದ್ದರೂ ಕೂಡ ವೈದ್ಯರು ಎನ್ನುವ ರೀತಿಯಲ್ಲಿ ಬಿಂಬಿಸಿಕೊಂಡು ಗ್ರಾಮೀಣ ಜನರನ್ನು ವಂಚಿಸುತ್ತಿರುವವರಿಗೆ ಇಂದು ಅಂತ್ಯ ಹಾಡಲು ಇದು ಸಕಾಲ” ಎಂದು ಈಚೆಗೆ ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ವು, ಪ್ಯಾರಾ ಮೆಡಿಕಲ್ ಕೋರ್ಸ್‌ ಮಾಡಿ ಖಾಸಗಿ ವೈದ್ಯಕೀಯ ಸೇವೆ ಮುಂದುವರಿಸಲು ಪರವಾನಗಿ ನೀಡದ ರಾಜ್ಯ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ.

warning from government to fake doctors

ಕರ್ನಾಟಕದಲ್ಲಿ ಕ್ಲಿನಿಕ್ ನಡೆಸುವುದಕ್ಕೆ ಅನುಮತಿ ನಿರಾಕರಿಸಿ ಹಿಂಬರಹ ನೀಡಿದ್ದ ಜಿಲ್ಲಾ ಸಕ್ಷಮ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್ ಮೂಲದ ಅಣ್ಣಯ್ಯ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಂ ನಾಗಪ್ರಸನ್ನ ಅವರ ನೇತೃತ್ವದಲ್ಲಿ ಏಕಸದಸ್ಯ ಪೀಠ ತಿರಸ್ಕರಿಸಿದೆ.

ರೋಗಗಳಿಗೆ ಅಗತ್ಯ ಔಷಧಗಳೊಂದಿಗೆ ಸಮುದಾಯ ವೈದ್ಯಕೀಯ ಸೇವೆಯಲ್ಲಿ ಡಿಪ್ಲೊಮಾ ಪಡೆದವರನ್ನು ವೈದ್ಯರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಅರ್ಜಿದಾರರು ಸೊಸೈಟಿ ಕಾಯಿದೆಯಡಿ ನೋಂದಾಯಿಸಲ್ಪಟ್ಟಿರುವ ಕಾನ್ಪುರದ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕೊ ಟೆಕ್ನಿಕಲ್ಸ್ ಅಂಡ್ ಹೆಲ್ತ್ ಕೇರ್‌ನಲ್ಲಿ SMS-MD ಕೋರ್ಸ್‌ ಮಾಡಿದ್ದಾರೆ.

2024 ರಲ್ಲಿ ಶಾಲೆಗಳು ಇಷ್ಟು ದಿನ ಕ್ಲೋಸ್! ರಜೆಯ ಪಟ್ಟಿ ಬಿಡುಗಡೆ

ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನಾ ಕಾಯಿದೆ ಸೆಕ್ಷನ್ 2(ಕೆ) ಪ್ರಕಾರ ಹೋಮಿಯೋಪತಿ ವೈದ್ಯರ ಕಾಯಿದೆಯು, ಆಯುರ್ವೇದ, ಪ್ರಕೃತಿ ಚಿಕಿತ್ಸೆ, ಸಿದ್ಧ, ಯುನಾನಿ ಅಥವಾ ಯೋಗಾಭ್ಯಾಸ ಮತ್ತು ವೈದ್ಯಕೀಯ ನೋಂದಣಿ ಕಾಯಿದೆಯು, ಭಾರತೀಯ ವೈದ್ಯಕೀಯ ಕೇಂದ್ರ ಮಂಡಳಿ ಕಾಯಿದೆ, ಹೋಮಿಯೋಪತಿ ಕೇಂದ್ರ ಮಂಡಳಿ ಕಾಯಿದೆ ಮತ್ತು ವೈದ್ಯಕೀಯ ಮಂಡಳಿ ಕಾಯಿದೆ, 1956ರ ಅಡಿಯಲ್ಲಿ ನೋಂದಾಯಿಸಿಕೊಂಡಿರುವ ವ್ಯಕ್ತಿಗಳನ್ನು ವೈದ್ಯರು ಎಂದು ಕರೆಯಲಾಗುತ್ತದೆ. ಆದರೆ, ಅವುಗಳ ಅಡಿ ಅರ್ಜಿದಾರರು ನೋಂದಣಿ ಮಾಡಿಸಿಲ್ಲ.


ಆದ್ದರಿಂದ, ಖಾಸಗಿ ವೈದ್ಯರಾಗಿ ಸೇವೆ ಸಲ್ಲಿಸುವುದಕ್ಕೆ ಅವರನ್ನು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ. ಜೊತೆಗೆ, ಅರ್ಜಿದಾರರ ವಿದ್ಯಾಭ್ಯಾಸ ಕೆಪಿಎಂಎ ಕಾಯಿದೆ ಸೆಕ್ಷನ್ 2(ಕೆ)ಗೆ ಅನ್ವಯವಾಗಿಲ್ಲ. ಹೀಗಾಗಿ, ಅರ್ಜಿದಾರರು ವೈದ್ಯರಲ್ಲ. ಅದಕ್ಕಾಗಿ ಅವರು ವೈದ್ಯಕೀಯ ಸೇವೆ ಮುಂದುವರಿಸಲು ಅನುಮತಿಸಲು ಸಾಧ್ಯವಾಗುವುದಿಲ್ಲ ಎಂದು ಸರ್ಕಾರ ತಿಳಿಸಿರುವುದು ಸಮಂಜಸವಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ಜನರ ಖಾತೆಗೆ ಸರ್ಕಾರ ರೂ.10,000 ಜಮಾ! ಬೇಗ ಬೇಗ ಚೆಕ್‌ ಮಾಡಿ

ಪಡಿತರ ಚೀಟಿದಾರರಿಗೆ ಭರ್ಜರಿ ಘೋಷಣೆ! ಈ ಜನರಿಗೆ ಇನ್ನು 5 ವರ್ಷ ಇದೆಲ್ಲವೂ ಉಚಿತ

Leave a Comment