ಹಲೋ ಸ್ನೇಹಿತರೇ,Home Guard Recruitment2024 ಬೆಂಗಳೂರು ನಗರದ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂದು ಈ ಲೇಖನದಲ್ಲಿ ತಿಳಿಯಿರಿ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ, ಅರ್ಜಿ ಪಡೆಯಲು ಜನವರಿ 5 ಕೊನೆಯ ದಿನವಾಗಿದೆ.
1)19 ವರ್ಷ ವಯಸ್ಸಿನ ಅಭ್ಯರ್ಥಿಗಳು SSLC ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿಬೇಕಾಗುತ್ತದೆ.
2) ಉತ್ತಮ ಆರೋಗ್ಯ & ದೇಹದಾರ್ಢ್ಯತೆ ಹೊಂದಿರಬೇಕಾಗುತ್ತದೆ.
3) ಕಂಪ್ಯೂಟರ್ ಟೈಪಿಂಗ್ (ಕನ್ನಡ & ಇಂಗ್ಲೀಷ್) ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರ್, ಎಲೆಕ್ಟ್ರೀಷಿಯನ್, ಪೈಂಟರ್ & ಪ್ಲಂಬರ್ ಇತ್ಯಾದಿ ಕೌಶಲ್ಯಗಳ ತರಬೇತಿ ಹೊಂದಿರುವವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು
ಆಸಕ್ತರು ಅರ್ಜಿ ನಮೂನೆಗಳನ್ನು ಸಮಾದೇಷ್ಟ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ ಹಾಗೂ ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ, ಮತ್ತು ಬೆಂಗಳೂರು-560010 ಇಲ್ಲಿಗೆ ಅರ್ಜಿ ಪಡೆಯಬೇಕು. ಅರ್ಜಿಗಳನ್ನು ಜನವರಿ 5 ಮಧ್ಯಾಹ್ನ 2.30ರಿಂದ 5ಗಂಟೆ ವರೆಗೂ ಉಚಿತವಾಗಿ ವಿತರಿಸಲಾಗುತ್ತದೆ. ಅರ್ಜಿ ಪಡೆಯುವ ಸಂದರ್ಭದಲ್ಲಿ ಜನ್ಮ ದಿನಾಂಕವುಳ್ಳ ಶಾಲೆಯ ಒರಿಜಿನಲ್ ಟಿಸಿ /ಒರಿಜಿನಲ್ ಅಂಕಪಟ್ಟಿ ನೀಡ ಅರ್ಜಿ ಪಡೆಯಬಹುದು ಎಂದು ಬೆಂಗಳೂರು ಉತ್ತರ ಜಿಲ್ಲಾ ಹೋಮ್ ಗಾರ್ಡ್ಸ್ ಕಮಾಂಡೆಂಟ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 080-23142542 ಸಂಪರ್ಕ ಮಾಡಿ.
ಇತರೆ ವಿಷಯಗಳು
ನೀರಾವರಿ ಸೌಲಭ್ಯಕ್ಕೆ ಕೃಷಿ ಭಾಗ್ಯ ಯೋಜನೆ ಜಾರಿ.! 90% ವರೆಗೆ ಸಬ್ಸಿಡಿ