ಹಲೋ ಸ್ನೇಹಿತರೇ, ರಾಜ್ಯದ ಅನೇಕ ಭಾಗಗಳಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡು, ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿಯಲ್ಲಿ ರೈತರು ತೊಡಗಿದ್ದಾರೆ. ಕೆಲವರು 1, 2 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡ್ತಿದ್ರೆ ಮತ್ತೆ ಕೆಲವರು 3 ಅಥವಾ ಅದಕ್ಕಿಂತ ಹೆಚ್ಚು ಎಕರೆ ಸರ್ಕಾರಿ ಭೂಮಿಯಲ್ಲಿ ಕೃಷಿ ನಡೆಸುತ್ತಿದ್ದಾರೆ.
ಇಂತಹ ರೈತರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ 3 ಎಕರೆಗಿಂತ ಹೆಚ್ಚು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡು ಕೃಷಿ ಮಾಡ್ತಿದ್ರೆ ಅಷ್ಟು ಭೂಮಿ ಸಕ್ರಮವಿಲ್ಲ ಅಂತ ರಾಜ್ಯ ಸರ್ಕಾರ ತಿಳಿಸಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ನಡೆಸುತ್ತಿರುವಂತ ರೈತರಿಗೆ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದ್ದ 7 ಸಾವಿರ ರೈತರಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡೋದಾಗಿ ತಿಳಿಸಿದ್ದಾರೆ.
ಇದನ್ನೂ ಸಹ ಓದಿ : ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ! ಮುಖ್ಯಮಂತ್ರಿಯವರ ಅಧಿಕೃತ ಘೋಷಣೆ
ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರೋರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದೇ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕುಪತ್ರ ನೀಡಲಾಗುವುದು ಅಂತ ಹೇಳಿದ್ದಾರೆ.
ಇನ್ನೂ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ. ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಇತರೆ ವಿಷಯಗಳು:
ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರು! ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ
ಕೇವಲ 1500 ರೂ.ಗಳನ್ನು ಕಟ್ಟಿದರೆ ಲಕ್ಷ ಲಕ್ಷ ಸಿಗತ್ತೆ! ಪೋಸ್ಟ್ ಆಫೀಸ್‌ನ ಈ ಸ್ಕೀಮ್ ತುಂಬಾ ಜನರಿಗೆ ಗೊತ್ತಿಲ್ಲ
ಹೊಸ ವರ್ಷದ ಆರಂಭದಲ್ಲೇ ಗ್ಯಾಸ್ ಸಿಲಿಂಡರ್ ಮತ್ತು ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ!