ಹಲೋ ಸ್ನೇಹಿತರೇ, ಸರ್ಕಾರವು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಹೊರತಂದಿದೆ. ಪ್ರತಿ ವರ್ಷ ಪ್ರಥಮ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಅರ್ಹತ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಈ ಕುರಿತಾದ ಸಂಪೂರ್ಣ ವಿವರವಾದ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..
![free laptop scheme](https://i0.wp.com/bangalore.vidyamana.com/wp-content/uploads/2024/01/free-laptop-scheme.jpg?resize=900%2C506&ssl=1)
ಸರ್ಕಾರವು ಶಿಕ್ಷಣದ ಗುಣಮಟ್ಟ ಕಾಪಾಡಲು, ಉನ್ನತ ಶಿಕ್ಷಣಕ್ಕೆ ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ. ಅವುಗಳ ಪೈಕಿ ಉಚಿತ ಲ್ಯಾಪ್ಟಾಪ್ ಯೋಜನೆಯು ಸಹ ಒಂದು. ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡಲಾಗುತ್ತದೆ. ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಸೌಲಭ್ಯಗಳನ್ನು ಯಾರೆಲ್ಲ ಪಡೆಯಬಹುದು, ಅರ್ಜಿ ಸಲ್ಲಿಕೆ ಹೇಗೆ, ಅಪ್ಲಿಕೇಶನ್ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.
ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್ಟಾಪ್ ಸೌಲಭ್ಯವನ್ನು ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಿದ್ದು, ವಿದ್ಯಾರ್ಥಿಗಳು ಅಪ್ಲಿಕೇಶನ್ ಅನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ dce.karnataka.gov.in ನಲ್ಲಿ ಪಡೆದುಕೊಳ್ಳಬಹುದು.
ಉಚಿತ ಲ್ಯಾಪ್ಟಾಪ್ಗೆ ಯಾರು ಅರ್ಜಿ ಸಲ್ಲಿಸಬಹುದು?
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪಾಸ್ ಮಾಡಿ ಅಥವಾ ಸಿಬಿಎಸ್ಇ ಬೋರ್ಡ್ನಿಂದ 12ನೇ ತರಗತಿ ಉತ್ತೀರ್ಣರಾಗಿ, ರಾಜ್ಯದ ಯಾವುದೇ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಥಮ ವರ್ಷದ ಸ್ನಾತಕ ಕೋರ್ಸ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಸಹ ಓದಿ : ದೇಶದ ಲಕ್ಷ ಲಕ್ಷ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಮೋದಿ ಸರ್ಕಾರದಿಂದ ಬಂಪರ್ ಉಡುಗೊರೆ
ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸೌಲಭ್ಯ ಸಿಗಲಿದೆ. ಕಾಲೇಜುಗಳ ಪಟ್ಟಿ ಚೆಕ್ ಮಾಡಲು ಲಿಂಕ್ ಕೆಳಗಿನಂತಿದೆ.
ಖಾಸಗಿ ಅನುದಾನಿತ ಕಾಲೇಜುಗಳು – ಕ್ಲಿಕ್ ಮಾಡಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು – ಕ್ಲಿಕ್ ಮಾಡಿ
ಇತರೆ ಅರ್ಹತೆಗಳು:
- ವಿದ್ಯಾರ್ಥಿ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಯಾವುದೇ ಕೆಟಗರಿ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು.
- ಎಸ್ಸಿ / ಎಸ್ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಆಧ್ಯತೆ ನೀಡಲಾಗುತ್ತದೆ.
- ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮೊದಲನೇ ವರ್ಷದ ಸ್ನಾತಕ ಪದವಿ ವ್ಯಾಸಂಗಕ್ಕೆ ಪ್ರವೇಶ ಪಡೆದಿರಬೇಕು.
ಉಚಿತ ಲ್ಯಾಪ್ಟಾಪ್ ಸೌಲಭ್ಯಕ್ಕೆ ಅರ್ಜಿ ಹಾಕಲು ಬೇಕಾದ ದಾಖಲೆಗಳು:
- ರಾಜ್ಯದ ನಿರ್ದಿಷ್ಟ ಸ್ಥಳದಲ್ಲಿ ವಾಸಿಸುತ್ತಿರುವ ಬಗ್ಗೆ ವಸತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಆಧಾರ್ ಲಿಂಕ್ ಮಾಡಿರುವ ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತ್ತೀಚಿಗೆ ತೆಗೆಸಿದ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ವಿದ್ಯಾರ್ಹತೆ ಪ್ರಮಾಣ ಪತ್ರ ( ಪಿಯುಸಿ ಅಂಕಪಟ್ಟಿ ಜೆರಾಕ್ಸ್)
- ಪದವಿಗೆ ಪ್ರವೇಶ ಪಡೆದಿರುವ ಕುರಿತು ದಾಖಲೆ
ಇತರೆ ವಿಷಯಗಳು:
ಆವಾಸ್ ಯೋಜನೆಯ ಮೊದಲ ಕಂತಿನ ಹಣ ಬಿಡುಗಡೆ! ನಿಮಗೂ ಬಂದಿದೆಯಾ ಚೆಕ್ ಮಾಡಿ
ಶಾಲಾ ರಜೆ ಮತ್ತೆ ಮುಂದೂಡಿಕೆ! ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ಆದೇಶ
ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡ್ತಿರೋ ರೈತರಿಗೆ ಬಿಗ್ ಶಾಕ್! ಸರ್ಕಾರದಿಂದ ಕ್ರಮ