ಹಲೋ ಸ್ನೇಹಿತರೇ, ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದ ಮೇರೆಗೆ ಸಂಬಳದಲ್ಲಿ ಹೆಚ್ಚಳ ಮತ್ತು ಅನೇಕ ಸೌಲಭ್ಯಗಳನ್ನು ನೀಡಲು ಸರ್ಕಾರ ಮುಂದಾಗಿದೆ ಏನೆಲ್ಲಾ ಸೌಲಭ್ಯಗಳು ಸಿಗಲಿದೆ ಮತ್ತು ಎಷ್ಟು ವೇತನ ಹೆಚ್ಚಳ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.
5 ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5,000 ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6,000 ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7,000 ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8,000ರೂ. ಗಳಷ್ಟು ಗೌರವಧನ ಏರಿಕೆ.
ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5 ಸಾವಿರ ರೂ. ಗಳಿಂದ 8 ಸಾವಿರ ರೂ. ಗಳಷ್ಟು ಗೌರವಧನ ಏರಿಕೆ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಣೆ ಮಾಡಲಾಗಿದೆ.
ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ & ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಎಲ್ಲಾ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದ್ದು. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ನಾವು ದನಿ ಎತ್ತಿ ವೇತನ ಏರಿಕೆಗೆ ಒತ್ತಾಯಿಸಿದ್ದನ್ನು ನೆನಸಿಕೊಂಡ ಮುಖ್ಯಮಂತ್ರಿಗಳು, ಇದೀಗ 2 ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಏರಿಕೆಗೆ ಮುಂದಾಗಿದೆ.
ಜೊತೆಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ , ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ ಹಣ. ಇಡಿಗಂಡು ನೀಡಲಾಗುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡಲಾಗುವುದು ಹಾಗೂ 3 ತಿಂಗಳ ವೇತನ ಸಹಿತವಾದ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆಯನ್ನು ನೀಡಿದ್ದಾರೆ.
ಇತರೆ ವಿಷಯಗಳು
ಹೊಸ ಲೇಬರ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ.! ನೀವು ಪಡೆದುಕೊಳ್ಳಬೇಕಾ? ಹಾಗಿದ್ದರೆ ತಕ್ಷಣ ಈ ಕೆಲಸ ಮಾಡಿ