rtgh

ಗೃಹಲಕ್ಷ್ಮಿ ಸಮಸ್ಯೆಗೆ ಇಲ್ಲಿದೆ ಪರಿಹಾರ! ಗ್ರಾಮ ಒನ್ ನಲ್ಲಿ ಹೊಸ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ

ಹಲೋ ಸ್ನೇಹಿತರೇ, ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದ ಫಲಾನುಭವಿಗಳ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಅರ್ಹ ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ಹಂಚಿಕೊಂಡಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

gruhalakshmi yojana update
gruhalakshmi yojana update

ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ತಿದ್ದುಪಡಿಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು ಅದರೆ ಈಗ ಪುನಃ ಸಂಬಂಧಪಟ್ಟ ಇಲಾಖೆಯಿಂದ ಹೊಸ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಅವಕಾಶ ನೀಡಲಾಗಿದೆ.

ಯಾವೆಲ್ಲ ಸೇವೆಗಳಿಗೆ ಗ್ರಾಮ ಒನ್ ನಲ್ಲಿ ಅವಕಾಶವಿದೆ:

ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ ಅಗಿ ಮತ್ತು ಹೊಸ ರೇಷನ್ ಕಾರ್ಡ್ ಪಡೆದವರು ಇದೇ ರೀತಿ ಹಲವು ತಾಂತ್ರಿಕ ತೊಂದರೆಗಳಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವವರಿಗೆ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈಗಾಗಲೇ ಅರ್ಜಿ ಸಲ್ಲಿಸಿ ಇ-ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗದ ಕಾರಣ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವು ಪಡೆಯಲು ಸಾಧ್ಯವಾಗದವರ ತಮ್ಮ ಅರ್ಜಿಯನ್ನು ಸರಿಪಡಿಸಿಕೊಳ್ಳಬಹುದು.

ಇದನ್ನೂ ಸಹ ಓದಿ : GST ನಿಯಮದಲ್ಲಿ ಹೊಸ ಬದಲಾವಣೆ.! ಈ ಸರಕು & ಸೇವೆಗಳಿಗೆ ಕಟ್ಟಬೇಕು ಹೆಚ್ಚುವರಿ ತೆರಿಗೆ


ಬೇಕಾಗುವ ದಾಖಲೆಗಳು:

1) ರೇಷನ್ ಕಾರ್ಡ್ ಪ್ರತಿ
2) ಕುಟುಂಬದ ಯಜಮಾನಿ ಆಧಾರ್ ಕಾರ್ಡ್ ಪ್ರತಿ
3) ಯಜಮಾನಿ ಪತಿಯ ಆಧಾರ್ ಕಾರ್ಡ್ ಪ್ರತಿ
4) ಆಧಾರ್ ಲಿಂಕ್ ಮೊಬೈಲ್ ನಂಬರ್

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

  • ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್ ಟಿ ರಿಟರ್ನ್ಸ್ ಪಾವತಿದಾರರಾಗಿರಬಾರದು.

ಇತರೆ ವಿಷಯಗಳು:

ಅಂತ್ಯೋದಯ ಕಾರ್ಡ್ ಇದ್ದವರಿಗೆ ಭರ್ಜರಿ ಆಫರ್! 2028 ರವರೆಗೆ ಸಿಲಿದೆ ಉಚಿತ ರೇಷನ್‌

ಕಾರ್ಮಿಕ ಕಾರ್ಡ್ ಇದ್ದವರಿಗೆ ಬಂಪರ್! ಕೇಂದ್ರ ಸರ್ಕಾರದಿಂದ ಈ ತಿಂಗಳ ಹಣ ಖಾತೆಗೆ

ಆಭರಣ ಪ್ರಿಯರಿಗೆ ಸಂಕ್ರಾಂತಿಯ ಎಳ್ಳು-ಬೆಲ್ಲ! ಚಿನ್ನ ಬೆಳ್ಳಿಯ ಬೆಲೆಯಲ್ಲಿ ಭಾರಿ ಕುಸಿತ

Leave a Comment