ನಮಸ್ಕಾರ ಸ್ನೇಹಿತರೇ, ಪರಿಶಿಷ್ಠ ಜಾತಿ ಹಾಗೂ ಪಂಗಡದವರು ಸ್ವಾವಲಂಬನೆಯ ಜೀವನ ರೂಪಿಸಿಕೊಳ್ಳುವಂತಾಗಲು ಸಮಾಜ ಕಲ್ಯಾಣ ಇಲಾಖೆ ಅಡಿಯ ವಿವಿಧ ನಿಗಮಗಳಿಂದ ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 29ರ ಕೊನೆಯ ದಿನವಾಗಿತ್ತು, ಆದರೆ ಸರ್ಕಾರ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಗಂಗಾ ಕಲ್ಯಾಣ ಯೋಜನೆ:
ರೈತರ ಜಮೀನಗಳಲ್ಲಿ ಅಗತ್ಯವಿರುವ ಬೋರ್ವೆಲ್ ಗಳನ್ನು ಕೊರೆಸಿ ಪಂಪ್ ಸೆಟ್ ಅಳವಡಿಸಿಕೊಳ್ಳಲು ಸರ್ಕಾರ ಉಚಿತ ಸೌಲಭ್ಯ ಕಲ್ಪಿಸಿ ಕೊಡುತ್ತಿದ್ದಾರೆ. ಇದರ ಜೊತೆಗೆ ಈ ಯೋಜನೆಯಡಿಯಲ್ಲಿ 1.5 ಲಕ್ಷ ರೂ. ಗಳಿಂದ 3.50 ಲಕ್ಷ ರೂ. ವರೆಗೆ ರೈತರು ಸರ್ಕಾರದಿಂದ ಸಹಾಯಧನ ಪಡೆದುಕೊಳ್ಳಬಹುದು.
ಸಣ್ಣ ಹಾಗೂ ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಜೀವನವನ್ನು ಸಾಕಾರಗೊಳಿಸಲು ‘ಗಂಗಾ ಕಲ್ಯಾಣ ಯೋಜನೆ’ಯಡಿ ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಅರ್ಜಿ ಅಹ್ವಾನಿಸಿದೆ ಎಂದು ಸರ್ಕಾರ ಸ್ಪಷ್ಟ ಪಡಿಸಿದೆ. ಆಸಕ್ತರು ನಿಮ್ಮ ಮನೆ ಹತ್ತಿರದ ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಹಾಗೂ ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಗೂಗಲ್ ಪೇ ಬಳಸುವವರಿಗೆ ಆಘಾತ! ಹೊಸ ನಿಯಮ ಜಾರಿಗೆ.! ಪೇಮೆಂಟ್ ಮಾಡುವ ಮುನ್ನ ಎಚ್ಚೆತ್ತುಕೊಳ್ಳಿ
ಅರ್ಜಿಸಲ್ಲಿಸಲು ಬೇಕಾದ ದಾಖಲೆಗಳು
- ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು.
- ಆದಾಯ ಮಿತಿ ಗ್ರಾಮೀಣ ಪ್ರದೇಶಗಳಲ್ಲಿ 1.5 ಲಕ್ಷ ರೂ. ನಗರ ಪ್ರದೇಶದಲ್ಲಿ 2.00 ಲಕ್ಷ ರೂ.
- ಕನಿಷ್ಠ 21 ವರ್ಷ ವಯೋಮಾನ
- ಸಣ್ಣಹಿಡುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ ಮತ್ತು ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್ ಹಾಐ ಆಧಾರ್ ಕಾರ್ಡ್ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿ.
ಆಸಕ್ತರು ಅರ್ಹರು ಡಿಸೆಂಬರ್ 15 ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ನ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGok
ಭೂಒಡೆತನ ಯೋಜನೆ:
ಸಮಾಜ ಕಲ್ಯಾಣ ಇಲಾಖೆಯ ಅಡಿ ವಿವಿಧ ನಿಗಮಗಳಿಂದ ಭೂ ಒಡೆತನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದ ಅರ್ಹರು ಡಿಸೆಂಬರ್ 15 ರೊಳಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಎನ್ನುವುದನ್ನು ಸರ್ಕಾರ ತಿಳಿಸಿದ್ದಾರೆ.
ಇತರೆ ವಿಷಯಗಳು:
ರೈಲ್ವೆ ಪ್ರಯಾಣಿಕರಿಗೆ ಬಂಪರ್ ನ್ಯೂಸ್.! ಒಂದೇ ಟಿಕೆಟ್ ನಲ್ಲಿ 56 ದಿನ ಪ್ರಯಾಣ; ಇಂದಿನಿಂದಲೇ ಬುಕಿಂಗ್ ಆರಂಭ