ಹಲೋ ಸ್ನೇಹಿತರೇ, ರಾಜ್ಯದಲ್ಲಿ ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಯಾಗಿದೆ.

ಇದೆ ಕಾರಣಕ್ಕೆ ಹೊಸ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಜನರು ಕಾದು ಕುಳಿತಿದ್ದಾರೆ. ಈಗಾಗಲೇ ಸಲ್ಲಿಕೆ ಆಗಿರುವ ಸುಮಾರು ನಾಲ್ಕು ಲಕ್ಷ ಅರ್ಜಿಗಳಲ್ಲಿ ಒಂದಷ್ಟು ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿದೆ. ಇನ್ನೂ ಬಾಕಿ ಉಳಿದ ಮೂರು ಲಕ್ಷದಷ್ಟು ಅರ್ಜಿಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ವಿತರಣೆ ಮಾಡುವ ನಿಟ್ಟಿನಲ್ಲಿಯೇ ಸರ್ಕಾರ ಕಾರ್ಯ ಪ್ರವೃತ್ತವಾಗಿದೆ.
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಗುತ್ತೆ ಪ್ರಯೋಜನ
ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅವರ ಹಸಿವನ್ನು ನೀಗಿಸುವ ಸಲುವಾಗಿ ಉಚಿತವಾಗಿ ಪಡಿತರ ವಸ್ತುಗಳನ್ನೂ ನೀಡಲು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ವಿತರಣೆಯನ್ನು ಆರಂಭಿಸಿತು.
ಇದರ ಜೊತೆಗೆ ಬಡತನ ರೇಖೆಗಿಂತ ಮೇಲಿರುವ ಜನರು ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಈ ಕಾರ್ಡ್ ಇದ್ರೆ ಉಚಿತ ರೇಷನ್ ಪಡೆಯಲು ಸಾಧ್ಯವಾಗದೆ ಇದ್ದರೂ ಸರ್ಕಾರದ ಇತರ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.
ರೇಷನ್ ಕಾರ್ಡ್ ಪಡೆದುಕೊಳ್ಳಲು ಬೇಕಾಗಿರುವ ಅರ್ಹತೆಗಳು
- ಬಡತನ ರೇಖೆಗಿಂತ ಕೆಳಗಿರುವ ಕುಟುಂಬದವರು ಮಾತ್ರ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಹರು.
- ಕುಟುಂಬದ ವಾರ್ಷಿಕ ಆದಾಯ 20,000ಗಳನ್ನು ಮೀರಬಾರದು.
- 18 ವರ್ಷ ಮೇಲ್ಪಟ್ಟವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
- ಒಂದು ಕುಟುಂಬಕ್ಕೆ ಒಂದು ಬಿಪಿಎಲ್ ಕಾರ್ಡ್.
- ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ನೌಕರಿಯಲ್ಲಿ ಇರಬಾರದು.
- ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಹಿಸುವ ಕುಟುಂಬದ ಯಾವುದೇ ಸದಸ್ಯ ತೆರಿಗೆ ಪಾವತಿ ಮಾಡುವವರಾಗಿರಬಾರದು.
- ನಾಲ್ಕು ಚಕ್ರದ ವೈಟ್ ಬೋರ್ಡ್ ವಾಹನ ಹೊಂದಿರಬಾರದು
- ಸರ್ಕಾರದ ಈ ಕೆಲವು ಮುಖ್ಯ ಮಾನದಂಡಗಳನ್ನು ಪರಿಗಣಿಸಿ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.
ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಮಾಡಿಸಿಲ್ವಾ.! ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ
ಬೇಕಾಗಿರುವ ದಾಖಲೆಗಳು
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆ
- ಅರ್ಜಿದಾರರ ಲೇಬರ್ ಕಾರ್ಡ್ (ಇದ್ದರೆ)
- ಕುಟುಂಬದ ಗ್ರೂಪ್ ಫೋಟೋ
ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ?
ಸರಿಯಾದ ದಾಖಲೆಗಳನ್ನು ಹೊಂದಿದ್ದರೆ ಹೊಸ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಹತ್ತಿರದ ಆಹಾರ ಇಲಾಖೆಯಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಸ್ಥಳೀಯ ಪ್ರಾಧಿಕಾರ ಈ ದಾಖಲೆಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿ ಕುಟುಂಬಕ್ಕೆ ಬಿಪಿಎಲ್ ಕಾರ್ಡ್ ಒದಗಿಸುತ್ತದೆ. ಆದ್ರೆ ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆ ಆಗಿರುವ BPL ಕಾರ್ಡ್ ಅರ್ಜಿಗಳ ಪರಿಶೀಲನೆಯು ನಡೆಯುತ್ತಿದ್ದು, ಸದ್ಯ ಸುಮಾರು 20 ಸಾವಿರ BPL ಕಾರ್ಡ್ ವಿತರಣೆಗೆ ಸರ್ಕಾರ ಮುಂದಾಗಿದೆ.
ಇತರೆ ವಿಷಯಗಳು
ಮಹಿಳೆಯರಿಗೆ ಸರ್ಕಾರದಿಂದ ಉಚಿತ ಮೊಬೈಲ್ ಯೋಜನೆ: ಇಲ್ಲಿ ಅರ್ಜಿ ಹಾಕಿದವರಿಗೆ ಲಾಭ
ಪಡಿತರ ಚೀಟಿದಾರರಿಗೆ ಹೊಸ ಸುದ್ದಿ.! ರೇಷನ್ ಕಾರ್ಡ್‌ದಾರರ ಹೊಸ ಲಿಸ್ಟ್ ಬಿಡುಗಡೆ