rtgh

ನ್ಯಾಯಾಲಯದಲ್ಲಿ ಭರ್ಜರಿ ನೇಮಕಾತಿ.! PUC ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ರಾಮನಗರ ಪ್ರಧಾನ ಜಿಲ್ಲಾ & ಸತ್ರ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರರು ಗ್ರೇಡ್- III ಹಾಗೂ ಬೆರಳಚ್ಚುಗಾರರು & ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

court job karnataka

Typist- ಶೀಘ್ರಲಿಪಿಕಾರರು ಗ್ರೇಡ್ – III

ಈ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ / ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ / ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ, ಕನ್ನಡ, ಆಂಗ್ಲ ಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ. 

ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟಿಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ಮತ್ತು ಶೀಘ್ರಲಿಪಿ ಪ್ರೌಢ ದರ್ಜೆ ವಿಷಯವನ್ನು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿ ಉತ್ತೀರ್ಣರಾಗಿರಬೇಕಾಗುತ್ತದೆ.

(2) ಬೆರಳಚ್ಚುಗಾರರು:


ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು / ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟಿಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ರೂ.200/-, ಪ್ರವರ್ಗ 2A, 2B, 3C, & 3B ಗೆ ಸೇರಿದ ಅಭ್ಯರ್ಥಿಗಳಿಗೆ 100/- ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ಇದೆ. ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನಾಂಕ, ಆನ್‌ಲೈನ್‌ ಶುಲ್ಕ ಪಾವತಿಗೆ 23 ಜನವರಿ 2024 ಕೊನೆಯ ದಿನಾಂಕ.

ಅಭ್ಯರ್ಥಿಗಳು ONLINE ಅರ್ಜಿ ಸಲ್ಲಿಕೆ

1 ಅಭ್ಯರ್ಥಿಯು ಮೊಬೈಲ್ ನಂಬರ್ ಕಡ್ಡಾಯವಾಗಿ ನಮೂದಿಸಬೇಕು ಹಾಗೂ ಇ-ಮೇಲ್ ಐಡಿ ಹೊಂದಿದ್ದಲ್ಲಿ ನಮೂದಿಸಿ. ಒಂದು ವೇಳೆ SMS/ ಇ-ಮೇಲ್ ಮೂಲಕ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗುವುದಿಲ್ಲ.

2. ಅಭ್ಯರ್ಥಿಯ ಭಾವಚಿತ್ರ , ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸಬೇಕು.

A) ಬಣ್ಣದ ಭಾವಚಿತ್ರ ಇತ್ತೀಚಿನದ್ದಾಗಿರಬೇಕು, ಅಳತೆಯಲ್ಲಿ.. 5 cm ಉದ್ದ x 3.6 cm ಅಗಲವುಳ್ಳದಾಗಿರಬೇಕು & 50kb ಅಳತೆ ಹಾಗೂ ಅದು jpg ನಮೂನೆಯಾಗಿರಬೇಕು. ಭಾವಚಿತ್ರದ ಹಿಂದೆ ಬಿಳಿಬಣ್ಣದಾಗಿರಬೇಕು,

B) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕಾಗುತ್ತದೆ (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿಯನ್ನು ಮಾಡಬಾರದು.)

C) ಕಪ್ಪು ಬಾಲ್‌ ಪಾಯಿಂಟ್ ಪೆನ್ ತೆಗೆದುಕೊಂಡು ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5 cmಉದ್ದ x 7.5 cm ಅಗಲವುಳ್ಳದಾಗಿರಬೇಕು & 25kb ಅಳತೆ ಹೊಂದಿರಬೇಕು ಹಾಗೂ jpg ನಮೂನೆಯಲ್ಲಿದ್ದು ನಂತರ ಅಪ್‌ಲೋಡ್ ಮಾಡಬೇಕು.

3. ನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಮಾಡಬೇಕು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿ ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರವೇ ಇಟ್ಟುಕೊಳ್ಳಬೇಕು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರು ಪಡಿಸಬೇಕು,

4. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಬೇಕು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲು ಆಗುವುದಿಲ್ಲ.

5. ನ್ಯಾಯಾಲಯದ ಅಧಿಕೃತ ವೆಬ್ಸೈಟ್  ಭೇಟಿ ಮಾಡಿ ಅನ್ಲೈನ್ ಮುಖಾಂತರ 22-01-2024 ರಾತ್ರಿ 11:59 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗಿದೆ.

ವರ್ಷಾರಂಭದಲ್ಲೇ ಸಿಕ್ತು ಗುಡ್‌ ನ್ಯೂಸ್.!‌ ಸರ್ಕಾರದಿಂದ ಹೊಸ ರೇಷನ್‌ ಕಾರ್ಡ್‌ ವಿತರಣೆ

ಅನ್ನಭಾಗ್ಯ ಯೋಜನೆ ಹಣ ಖಾತೆಗೆ ಬಂದಿಲ್ವಾ? ರೇಷನ್ ಕಾರ್ಡ್‌ ನಂಬರ್ ಬಳಸಿ ಹೀಗೆ ಚೆಕ್‌ ಮಾಡಿ

Leave a Comment