rtgh

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ & ತಿದ್ದುಪಡಿಗೆ ಅವಕಾಶ.! ಚುನಾವಣಾ ಆಯೋಗ ಅಧಿಸೂಚನೆ

ಹಲೋ ಸ್ನೇಹಿತರೇ, ಭಾರತ ಚುನಾವಣಾ ಆಯೋಗವು ಹೊಸ ಅಧಿಸೂಚನೆಯನ್ನು ಹೊರಡಿಸಿದೆ ಇದರ ಪ್ರಕಾರ ಮತದಾರರ ಹೊಸ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ. ಎಂದಿನಿಂದ ಆರಂಭವಾಗಲಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ.

election commission voter id

ಭಾರತ ಚುನಾವಣಾ ಆಯೋಗ ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಜ 1. 2024ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ.

ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು ಜನೆವರಿ 12. 2024ಕ್ಕೆ ವಿಸ್ತರಿಸಲಾಗಿದೆ. ದತ್ತಾಂಶಗಳನ್ನು ಕ್ರೂಢೀಕರಿಸುವುದು, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನೆವರಿ 17. 2024ಕ್ಕೆ ನಿಗದಿಪಡಿಸಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕವನ್ನು ಜನವರಿ 22. 2024ಕ್ಕೆ ವಿಸ್ತರಣೆ ಮಾಡಲಾಗಿದೆ.

18 ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಸರು, ವಿಳಾಸ & ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಬಹುದಾಗಿದೆ (ಮರಣ ಹೊಂದಿದ ಮನೆಯ ಸದಸ್ಯರು) ನಮೂನೆ-7 ಅರ್ಜಿ ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ಡಿಸೆಂಬರ್ 27ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿ ಸಲ್ಲಿಸಬಹುದು.

ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ VHA App ಬಳಸಿಕೊಂಡು, ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಹೆಲ್ಪ್‍ಲೈನ್ ನಂ. 1950 ಕ್ಕೆ ಕರೆ ಮಾಡಿ ಮಾಹಿತಿ ತಿಳಿಯಬಹುದು. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ-6 ನ್ನು ಭರ್ತಿಮಾಡಿ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.


ಎಲ್ಐಸಿ ಸ್ಕಾಲರ್ಶಿಪ್; ಎಲ್ಲಾ ವಿದ್ಯಾರ್ಥಿಗಳಿಗು ₹40,000 ಫ್ರೀ.! ಆಸಕ್ತ & ಅರ್ಹ ಅಭ್ಯರ್ಥಿಗಳು ಕೂಡಲೇ ಅಪ್ಲೇ ಮಾಡಿ

ಹೊಸ ರೇಷನ್ ಕಾರ್ಡ್ ವಿತರಣೆಗೆ ಡೇಟ್ ಫಿಕ್ಸ್.! ಪಡೆಯುವುದು ಹೇಗೆ?

Leave a Comment