ನಮಸ್ಕಾರ ಸ್ನೇಹಿತರೆ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಿರಿಧಾನ್ಯ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಸಿರಿಧಾನ್ಯ ಬೆಳೆಯಲು ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಈಗ ಸುಮಾರು 800 ರಿಂದ ಸಾವಿರ ಹೆಕ್ಟರ್ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲಾಗುತ್ತಿದೆ. ಸಿರಿಧಾನ್ಯ ರೈತರಿಗೆ ನೆರವನ್ನು ಕೃಷಿ ಇಲಾಖೆಯ ರೈತ ಸಿರಿ ಯೋಜನೆಯ ಮೂಲಕ ನೀಡಲಾಗುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾಕ್ಟರ್ ಕಿರಣ್ ಕುಮಾರ್ ಅವರು ತಿಳಿಸಿದ್ದಾರೆ.

ರೈತಸಿರಿ ಯೋಜನೆ :
ಕೃಷಿ ಇಲಾಖೆಯಿಂದ ಸಿರಿಧಾನ್ಯ ರೈತರಿಗೆ ನೆರವು ನೀಡುವ ಉದ್ದೇಶದಿಂದ ರೈತ ಸಿರಿ ಯೋಜನೆಯನ್ನು ಜಾರಿಗೆ ತಂದಿದ್ದು ಸಿರಿಧಾನ್ಯ ಬಳಕೆಯ ಕುರಿತು ಕೃಷಿ ಇಲಾಖೆಯಿಂದ ಜಾಗೃತಿ ಮೂಡಿಸಲು ಸಿರಿಧಾನ್ಯಗಳ ಜಾಗೃತಿ ವಾಗ್ದಾನಗೆ ಚಾಲನೆ ನೀಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾಕ್ಟರ್ ಕಿರಣ್ ಕುಮಾರ್ ಅವರು ಮಾತನಾಡಿದರು. ಸಿರಿಧಾನ್ಯಗಳು ಅಂದರೆ ಬರಗೂ ರಾಗಿ ಹಾರಕ ನವಣೆ ಸಾಮಿ ಕೊರಲೆ ಹೀಗೆ ಸಿರಿಧಾನ್ಯಗಳು ಸಮೂಹವಾಗಿದೆ. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಕಿರಣ್ ಕುಮಾರ್ ಅವರು ಸುಮಾರು 5000 ವರ್ಷ ಬೇಸಾಯದ ಇತಿಹಾಸ ಹೊಂದಿವೆ, ಈ ಸಿರಿಧಾನ್ಯಗಳು ಎಂದು ಹೇಳಿದರು.
ಪ್ರಮುಖ ಆಹಾರ ಬೆಳೆಯುತ್ತಿವೆ ಎಂದು ಪ್ರಸ್ತುತ ಸನ್ನಿವೇಶದಲ್ಲಿ ಸಿರಿಧಾನ್ಯಗಳು ಎಂದು ಹೇಳಿದರು. ಈ ಸಿರಿಧಾನ್ಯಗಳನ್ನು ಅತಿ ಕಡಿಮೆ ಮಳೆ ಬೀಳುವ ಪ್ರದೇಶದಲ್ಲಿ ಶುಷ್ಕ ಒಣ ಸ್ಥಿತಿಯಲ್ಲಿ ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿಯೂ ಸಹ ಬೆಳೆಯಬಹುದಾಗಿದೆ ಎಂದು ತಿಳಿಸಿದರು. ರೈತರಿಗೆ ಸಿರಿಧಾನ್ಯ ಬೆಳೆಯುವ ಸಂದರ್ಭದಲ್ಲಿ ಲಾಭ ಹಾಗೂ ಸರ್ಕಾರದಿಂದ ಬೆಂಬಲ ಬೆಲೆಯ ಬಗ್ಗೆಯೂ ಸಹ ಅವರು ಮಾಹಿತಿ ನೀಡಿದರು.
ಇದನ್ನು ಓದಿ : ಶೀಘ್ರದಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲಿ ಆಗಲಿದೆಯೇ ಇಳಿಕೆ? ಲೀಟರ್ ಎಣ್ಣೆ ಕೊಳ್ಳಲು ಕ್ಯೂ ನಿಂತ ಮನೆ ಮಂದಿ
ಧಾರವಾಡ ಜಿಲ್ಲೆಯಲ್ಲಿ ಸಿರಿಧಾನ್ಯ :
ರಾಜ್ಯ ಸರ್ಕಾರವು ಸಿರಿಧಾನ್ಯಗಳ ಬೆಳೆಯನ್ನ ಎಂಟರಿಂದ ಸಾವಿರ ಹೆಕ್ಟರ್ ಪ್ರದೇಶದಲ್ಲಿ ಉತ್ತೇಜಿಸಿದ್ದು ಸಿರಿಧಾನ್ಯಗಳ ಕ್ಷೇತ್ರ ಹೆಚ್ಚಿಸುವುದರ ಜೊತೆಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಬೆಳೆದ ಸಿರಿಧಾನ್ಯಕ್ಕೆ ಸೂಕ್ತ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮೇಳಗಳು ಸೇರಿ ಎಲ್ಲಾ ಹಂತದಲ್ಲಿಯೂ ರೈತರಿಗೆ ಸಿರಿಧಾನ್ಯ ಮೇಳ ಆಯೋಜಿಸುವ ಮೂಲಕ ಹೆಚ್ಚಿನ ಅರಿವು ಗ್ರಾಹಕರಿಗೆ ಸಿರಿಧಾನ್ಯಗಳ ಬಗ್ಗೆ ಮೂಡಿಸಲಾಗುತ್ತದೆ ಎಂದು ತಿಳಿಸಿದರು.
ಎಂಟರಿಂದ 1000 ಹೆಕ್ಟೆರ್ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ ಎಂದು ಹೇಳಿದರು. ಸಿರಿಧಾನ್ಯಗಳನ್ನು ಬೆಳೆದ ರೈತರಿಗೆ 10,000ಗಳನ್ನು ನೇರ ನಗದು ಆಗಿ ಪ್ರತಿ ಹಿಟ್ಟಿಯರಿಗೂ ವರ್ಗಾವಣೆ ಅಂದರೆ ಡಿಬಿಟಿ ಮೂಲಕ ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದರು.
ಹೀಗೆ ರಾಜ್ಯ ಸರ್ಕಾರವು ಧಾರವಾಡ ಜಿಲ್ಲೆಯಲ್ಲಿ ಸಿರಿಧಾನ್ಯಗಳನ್ನು ಬೆಳೆಯುವ ರೈತರಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ರೈತ ಸಿರಿ ಯೋಜನೆಯನ್ನು ಜಾರಿಗೆ ತಂದು ಈ ಯೋಜನೆಯ ಮೂಲಕ ಸಾಕಷ್ಟು ಪ್ರಯೋಜನವನ್ನು ಸಿರಿಧಾನ್ಯ ಬೆಳೆಯುವ ರೈತರು ಪಡೆಯಬಹುದಾಗಿದೆ ಎಂದು ಹೇಳಲಾಗುತ್ತಿದೆ. ಅದರಂತೆ ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ರೈತ ಸಿರಿ ಯೋಜನೆಯನ್ನು ರಾಜ್ಯ ಸರ್ಕಾರವು ಜಾರಿಗೆ ತರುತ್ತದೆ ಎಂದು ಹೇಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮೆಲ್ಲ ರೈತ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ರೈತ ಸಿರಿ ಯೋಜನೆ ಜಾರಿಗೆ ಬರಲಿದೆ ಎಂಬುದನ್ನು ಶೇರ್ ಮಾಡಿ ಧನ್ಯವಾದಗಳು.