ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಲ್ಲಿರುವ ವಸತಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಫಲಾನುಭವಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂದು ಲೇಖನದಲ್ಲಿ ತಿಳಿಯಿರಿ.
ಇದು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಸತಿ ಶಾಲೆ ಹುಡುಕುತ್ತಿರುವವರಿಗೆ ಅನೂಕುಲವಾಗುವ ಅತಿ ಮುಖ್ಯ ಮಾಹಿತಿಯಾಗಿದೆ.
ಯಾವೆಲ್ಲ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ?
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ
- ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ
- ಏಕಲವ್ಯ ಮಾದರಿ
- ಅಟಲ್ ಬಿಹಾರಿ ವಾಜಪೇಯಿ
- ಶ್ರೀಮತಿ ಇಂದಿರಾಗಾಂಧಿ
- ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ
- ಶ್ರೀ ನಾರಾಯಣ ಗುರು ವಸತಿ ಶಾಲೆ ಇತ್ಯಾದಿ 807 ವಸತಿ ಶಾಲೆಗಳಲ್ಲಿ 2024-25ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಅರ್ಹರು ಯಾರು?
ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 5ನೇ ತರಗತಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 9 ರಿಂದ 13 ವಯೋಮಾನ ಹೊಂದಿದವರಾಗಿರಬೇಕು.
ಕುಟುಂಬದ ವಾರ್ಷಿಕ ಆದಾಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ. 2,50.000, ಹಾಗೂ ಹಿಂದುಳಿದ ವರ್ಗ 2A, 2B, 3A ಮತ್ತು 3B ಇವರಿಗೆ ರೂ. 1,00,000/- ನಿಗದಿತ ನಮೂನೆಯಲ್ಲಿ ಚಾಲ್ತಿಯಲ್ಲಿರುವ ಜಾತಿ ಮತ್ತು ವಾರ್ಷಿಕ ಆದಾಯ ಪ್ರಮಾಣಪತ್ರ ಹೊಂದಿರಬೇಕು.
- SATS ಅನ್ನು ಹೊಂದಿರಬೇಕು.
- ಇತ್ತೀಚಿನ ಭಾವಚಿತ್ರ, ಮೀಸಲಾತಿಯ ಪ್ರಯೋಜನಗಳನ್ನು ಕೋರಿರುವ ಪಕ್ಷದಲ್ಲಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪತ್ರ ಹಾಗೂ ವಿಶೇಷ ಪ್ರವರ್ಗಕ್ಕೆ ಸಂಬಂಧಿಸಿದ ಪ್ರಮಾಣಪತ್ರವನ್ನು ಹೊಂದಿರಬೇಕು.
ಇಂತವರಿಗೆ ವಿಶೇಷ ಅವಕಾಶವಿದೆ:
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ & ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ರಾಜ್ಯದ ಯಾವುದೇ ವಸತಿ ಶಾಲೆಯಲ್ಲಿ ಖಾಲಿ ಇರುವ ಸ್ಥಾನಕ್ಕೆ ನೇರವಾಗಿ ಪ್ರವೇಶವನ್ನು ಕಲ್ಪಿಸಲಾಗುವುದು.
ವಿಶೇಷ ವರ್ಗದಡಿ ಅಲೆಮಾರಿ, ಅರೆ ಅಲೆಮಾರಿ, ಸಫಾಯಿ ಕರ್ಮಚಾರಿ, ದೇವದಾಸಿ, ಪೌರಕಾರ್ಮಿಕ, ಸ್ಮಶಾನ ಕಾರ್ಮಿಕರ, ಚಿಂದಿ ಆಯುವವರ, ಮ್ಯಾನುಯಲ್ ಸ್ಕ್ಯಾವೆಂಜರ್ ಮಕ್ಕಳು & ಮೊಮ್ಮಕ್ಕಳು, ಆಶ್ರಯ ಶಾಲೆಗಳ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಪ್ರವೇಶಾತಿಯನ್ನು ನೀಡಲಾಗುವುದು. ಈ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು?
ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31 2023 ಕೊನೆಯ ದಿನಾಂಕ.
2024 ನೇ ಫೆಬ್ರವರಿ 18 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪ್ರವೇಶ ಪರೀಕ್ಷೆಯ ಫಲಿತಾಂಶ ಮತ್ತು ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣದಲ್ಲಿ ಪ್ರಕಟಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:
9482300400 ಹಾಗೂ ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುವ ಹತ್ತಿರದ ವಸತಿ ಶಾಲೆಗಳು, ಇನ್ನು ಹೆಚ್ಚಿನ ಮಾಹಿತಿಗೆ ಕಾಲೇಜುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.
ಇತರೆ ವಿಷಯಗಳು
ಮಹಿಳೆಯರ ಆರೈಕೆ ಮಾಡಲಿದೆ ರಾಜ್ಯ ಸರ್ಕಾರ; ಬಂತು ಹೊಸ ಗ್ಯಾರಂಟಿ
BPL ಕಾರ್ಡುದಾರರಿಗೆ ಇನ್ಮೇಲೆ ಅಕ್ಕಿ ಮಾತ್ರ ಫ್ರೀ ಅಲ್ಲ, ಇವು ಇನ್ನು ಪುಕ್ಕಟೆ