rtgh

ಗೃಹಲಕ್ಷ್ಮಿ ಸಮಸ್ಯೆಗೆ ಇಲ್ಲಿದೆ ಪರಿಹಾರ!! ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಕ್ಯಾಂಪ್ ಆಯೋಜನೆ’

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮೀ ಯೋಜನೆಗೆ ದಿನಾಂಕ;19-07-2023 ರಂದು ಚಾಲನೆ ನೀಡಿರುತ್ತದೆ. ಇದುವರೆಗೂ, 1.17 ಕೋಟಿ ಮಹಿಳಾ ಕುಟುಂಬ ಮುಖ್ಯಸ್ಥರು ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಪ್ರತಿ ತಿಂಗಳು ಅವರುಗಳ ಬ್ಯಾಂಕ್ ಖಾತೆಗೆ ರೂ. 2,000/-ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿ ಮಾಡಲಾಗುತ್ತಿದೆ.

gruha lakshmi yojana

ಈ ಪ್ರಕ್ರಿಯೆಯಲ್ಲಿ ಸುಮಾರು 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ.

ಗೃಹಲಕ್ಷ್ಮೀ ಯೋಜನೆಯ ಸೂಚನೆಗಳು:

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ: 27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವ ಕುರಿತು ಈ ಕೆಳಕಂಡಂತ ಸೂಚನೆಗಳನ್ನು ನೀಡಲಾಗಿದೆ.

  • ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲಾಗುವುದು.
  • ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸುವುದು.
  • ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು Electronic Delivery of Citizen Services (EDCS) ತಂಡಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸಲಿದ್ದಾರೆ.
  • ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸಲಿದ್ದರೆ.

ಇದನ್ನೂ ಸಹ ಓದಿ : ನಿಮ್ಮ ಮನೆಗೆ ಸೌರಫಲಕ ಸಿಗಲಿದೆ : ಮಧ್ಯಮ ವರ್ಗದವರೆ ಈ ಕೂಡಲೇ ಅರ್ಜಿ ಸಲ್ಲಿಸಿ

ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಲಾಗುತ್ತದೆ:

  • ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು.
    ಇ-ಕೆವೈಸಿ ಅಪ್‌ಡೇಟ್ ಮಾಡುವುದು.
  • ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸುವುದು.
  • ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸುವುದು.
  • ಪ್ರತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಿನಾಂಕ:27.12.2023 ರಿಂದ 29.12.2023 ರವರೆಗೆ ಪ್ರತಿದಿನ ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆಯವರೆಗೆ ಕ್ಯಾಂಪ್‌ಗಳನ್ನು ಆಯೋಜಿಸುವುದು.
  • ಕ್ಯಾಂಪ್ ಆಯೋಜಿಸುವ ಕುರಿತು ಫಲಾನುಭವಿಗಳಿಗೆ EDCS ರವರು SMS ಮೂಲಕ ಮಾಹಿತಿ ನೀಡುವುದು.
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕ್ಷೇತ್ರಮಟ್ಟದ ಸಿಬ್ಬಂದಿಗಳು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡಿ, ಅವರನ್ನು ಕ್ಯಾಂಪ್‌ಗಳಿಗೆ ಕರೆತರುವ ಜವಾಬ್ದಾರಿ ನಿರ್ವಹಿಸುವುದು.
  • ಕ್ಯಾಂಪ್ ಆಯೋಜಿಸುವ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪತ್ರಿಕೆ ಮತ್ತು ಇತರೆ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡಲಾಗುತ್ತದೆ.

ಮೇಲೆ ತಿಳಿಸಿದಂತೆ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಕ್ಯಾಂಪ್‌ಗಳನ್ನು ಆಯೋಜಿಸಿ ಯಶಸ್ವಿಗೊಳಿಸಲು ಸೂಚಿಸಿದೆ.


ಇತರೆ ವಿಷಯಗಳು:

ಆಸ್ತಿ ಖರೀದಿಸುವ ಮುನ್ನ ಈ ದಾಖಲೆ ಕಡ್ಡಾಯ! ಆಸ್ತಿ ಒಡೆತನಕ್ಕೆ ಸರ್ಕಾರದ ಹೊಸ ಕಾನೂನು

ಈ ಖಾತೆ ತೆರೆದವರಿಗೆ ಗೃಹಲಕ್ಷ್ಮಿ ಯೋಜನೆ ಹಣ 1 ದಿನದಲ್ಲಿ ಜಮಾ ಅಗುತ್ತೆ

ರಾತ್ರಿ ಲೇಟಾಗಿ ನಿದ್ರೆ ಮಾಡುತ್ತಿದ್ದೀರಾ? ಹಾಗಾದ್ರೆ ಈ ವಿಚಾರ ತಿಳಿದಿರಲಿ

Leave a Comment