ಹಲೋ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಬ್ಯಾಂಕ್, ಆಧಾರ್ ಕಾರ್ಡ್ ಲಿಂಕ್ ಸೇರಿದಂತೆ ಕೆಲ ತಾಂತ್ರಿಕ ಸಮಸ್ಯೆಗಳು ಈ ಯೋಜನೆಗೆ ಎದುರಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸಲು ಮೂರು ದಿನ ವಿಶೇಶ ಕ್ಯಾಂಪ್ ಆರಂಭಿಸಿದೆ. ಶಿಬಿರದಲ್ಲಿ ಏನೆಲ್ಲಾ ಲಾಭ ಸಿಗಲಿದೆ ಎಂಬುದನ್ನು ನಮ್ಮ ಈ ಲೇಖನದಲ್ಲಿ ತಿಳಿಯರಿ.
ಮನೆ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲು ವಿಶೇಷ ಶಿಬಿರ ನಿಯೋಜಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರವರೆಗೆ 3 ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು, ಗೃಹಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಕಂಡಿದ್ದರೆ ಫಲಾನುಭವಿಗಳು ನಿಮ್ಮ ಗ್ರಾಮ ಪಂಚಾಯತಿಗಳಿಗೆ ತೆರಳಿ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾ. ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅದರಂತೆ, ದಿನಾಂಕ: 27 ರಿಂದ 29 ರವರೆಗೆ ಕ್ಯಾಂಪ್ ಆಯೋಜಿಸಿದ್ದು, ಈ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸುವಂತೆ ಸಿಎಂ ಸೂಚನೆಯನ್ನು ನೀಡಿದ್ದಾರೆ.
3 ದಿನ ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ಈ ಶಿಬಿರದಲ್ಲಿ ಸುಮಾರು ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಜೋಡಣೆ, ಫಲಾನುಭವಿಗಳ ಬ್ಯಾಂಕ್ ಖಾತೆಯ ಸಮಸ್ಯೆ, ಹಣ ಜಮೆಗೆ ಸಂಬಂಧಿಸಿದಂತೆ ಈ ಯೋಜನೆಗಯ ಲಾಭ ಪಡೆದುಕೊಳ್ಳಲು ಫಲಾನುಭವಿಗಳಿಗೆ ಸಾಕಷ್ಟು ಸಮಸ್ಯೆಗಳು ಆಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಈ ಕ್ಯಾಂಪ್ನಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.
- ಕ್ಯಾಂಪ್‌ಗಳಲ್ಲಿ ಫಲಾನುಭವಿಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಲಾಗುವುದು.
- ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆಯನ್ನು ಮಾಡುವುದು.
- ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು & ಆಧಾರ್ ಕಾರ್ಡ್ ಜೋಡಣೆ ಮಾಡುವುದು.
- ಇ-ಕೆವೈಸಿ Update ಮಾಡುವುದು.
- ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲನೆ ಮಾಡುವುದು.
- ಈ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹಾರ ಮಾಡುವುದು.
ಇತರೆ ವಿಷಯಗಳು
ಹೊಸ ವರ್ಷಕ್ಕೆ ಬದಲಾಗಲಿದೆ ಈ ರಾಶಿಯವರ ಲಕ್.!! ನಿಮ್ಮಿಷ್ಟದ ಕೆಲಸಗಳು ಆಗಲು ಈ ಸೂತ್ರ ಅನುಸರಿಸಿ
ನಿಮ್ಮನೆ ನಿರ್ಮಾಣಕ್ಕೆ ಸಿಗಲಿದೆ 1.50 ಲಕ್ಷ ರೂ. ಕಾರ್ಮಿಕರಿಗೆ ಸರ್ಕಾರದ ಧಮಾಕ.! ಇಂದೇ ಚೆಕ್ ಮಾಡಿ