rtgh

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ & ತಿದ್ದುಪಡಿಗೆ ಅವಕಾಶ.! ತಕ್ಷಣ ಈ ಕೇಂದ್ರವನ್ನು ಸಂಪರ್ಕಿಸಿ

ಹಲೋ ಸ್ನೇಹಿತರೇ, ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು & ಈಗಾಗಲೇ ಅರ್ಜಿ ಸಲ್ಲಿಸಿ ಹಣ ಬರದವರ ಅರ್ಜಿಯನ್ನು ತಿದ್ದುಪಡಿ ಮಾಡಲು ಗ್ರ‍ಾಮ ಒನ್ ಕೇಂದ್ರಗಳಲ್ಲಿ ಅವಕಾಶ ಮಾಡಿಕೊಡಲಾಗುವತ್ತದೆ, ಗ್ರಾಮ ಒನ್‌ ಕೇಂದ್ರದಲ್ಲಿ ಎಂದಿನಿಂದ ಈ ವ್ಯವಸ್ಥೆ ಜಾರಿ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

gruhalakshmi scheme grama one

ಅರ್ಹ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಬಹುದು ಎಂದು ಗ್ರಾಮ ಒನ್ ಪ್ರತಿನಿಧಿಗಳು ಮಾಹಿತಿ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ತಿದ್ದುಪಡಿಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಲಾಗಿದ್ದು ಅದರೆ ಈಗ ಪುನಃ ಸಂಬಂಧಪಟ್ಟ ಇಲಾಖೆಯಿಂದ ಹೊಸ ಅರ್ಜಿ ಸಲ್ಲಿಸಲು ಮತ್ತು ಅರ್ಜಿಯ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಲ್ಲಿ ಅವಕಾಶ ನೀಡಲಾಗಿದೆ

ಯಾವೆಲ್ಲ ಸೇವೆಗಳಿಗೆ ಗ್ರಾಮ ಒನ್ ನಲ್ಲಿ ಅವಕಾಶವಿದೆ:

ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ & ಹೊಸ ರೇಷನ್ ಕಾರ್ಡ್ ಪಡೆದವರು ಇದೆ ರೀತಿ ಹಲವು ತಾಂತ್ರಿಕ ಸಮಸ್ಯೆಗಳಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗ್ದೆ ಇರುವವರಿಗೆ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು.


ಈಗಾಗಲೇ ಅರ್ಜಿ ಸಲ್ಲಿಸಿ ಇ-ಕೆವೈಸಿ , ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇರುವ ಕಾರಣ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವು ಪಡೆದು ಕೊಳ್ಳಲು ವಂಚಿತರಾದವರು ತಮ್ಮ ಅರ್ಜಿಯನ್ನು ಸರಿಪಡಿಸಿಕೊಳ್ಳಬಹುದಾಗಿದೆ.

ಬೇಕಾಗುವ ದಾಖಲೆಗಳು:

1) ರೇಷನ್ ಕಾರ್ಡ ಪ್ರತಿ.
2) ಕುಟುಂಬದ ಯಜಮಾನಿ ಆಧಾರ್ ಕಾರ್ಡ್ ಪ್ರತಿ.
3) ಯಜಮಾನಿ ಪತಿಯ ಆಧಾರ್ ಕಾರ್ಡ ಪ್ರತಿ.
4) ಆಧಾರ್ ಲಿಂಕ್ ಮೊಬೈಲ್ ನಂಬರ್.

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಆಹಾರ & ನಾಗರೀಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ,apl & bpl ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದರೆ ಒಂದು ಮಹಿಳೆಗೆ ಮಾತ್ರ ಈ ಯೋಜನೆ ಲಾಭ ಸಿಗುತ್ತದೆ.

ಕುಟುಂಬದ ಯಜಮಾನಿ /ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿರಬಾರದು.

ಈ ಕಾರ್ಡ್‌ ಇದ್ದವರಿಗೆ ಮೊದಲ ಕಂತಿನ ಹಣ ಬಿಡುಗಡೆ! ಸರ್ಕಾರದಿಂದ 1,550 ರೂ. ಖಾತೆಗೆ ಜಮಾ

90% ಸಬ್ಸಿಡಿಯಲ್ಲಿ ನಿಮ್ಮದಾಗಲಿದೆ ಸೋಲಾರ್‌ ಪಂಪ್ ಸೆಟ್; ರೈತರಿಗೆ ಬೊಂಬಾಟ್‌ ಆಫರ್.!

Leave a Comment