rtgh

Breaking News: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ.!! ಸರ್ಕಾರದಿಂದ ನಿಮ್ಮ ವೇತನದಲ್ಲಿ ಭಾರೀ ಹೆಚ್ಚಳ

ಹಲೋ ಸ್ನೇಹಿತರೇ, ರಾಜ್ಯದ ‘ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 5 ಸಾವಿರ ವೇತನ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.

Guest Lecturer Salary Increase

ಈ ಬಗ್ಗೆ ಇಂದು ವಿಕಾಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅತಿಥಿ ಉಪನ್ಯಾಸಕರು ಹಲವು ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿದ್ದರು.

ಅಲ್ಲದೇ ಮನವಿ ಮಾಡಿದ್ದರು. ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಕೂಡ ಒಪ್ಪಿಗೆ ನೀಡಿದ್ದಾರೆ ಎಂದರು.

ಅತಿಥಿ ಉಪನ್ಯಾಸಕರಿಗೆ ವೇತನ ಸಹಿತ ತಿಂಗಳಿಗೆ ಒಂದು ರಜೆ ನೀಡಲಾಗುವುದು. 60 ವರ್ಷಗಳು ಪೂರೈಸಿದಂತ ಅತಿಥಿ ಉಪನ್ಯಾಸಕರಿಗೆ ಕೆಲಸ ಬಿಡುವಾಗ 5 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಅದು ಅಲ್ಲದೆ ನೌಕರರಿಗೆ ಆರೋಗ್ಯ ವಿಮಾ ಯೋಜನೆ ಕೂಡ ಜಾರಿಗೊಳಿಸಲಾಗುತ್ತಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಇಲ್ಲಿಂದ ಚೆಕ್‌ ಮಾಡಿ


ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದಂತ ಅತಿಥಿ ಉಪನ್ಯಾಸಕರನ್ನು ಪರಿಗಣಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಹೇಳಿದರು.

ವೇತನ ಹೆಚ್ಚಳ ಮತ್ತು ಹುದ್ದೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರುಗಳು ಪ್ರತಿಭಟನೆಯನ್ನು ನಡೆಸಿದ್ದರು. ಸದ್ಯ ಇದೀಗ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಈ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ತಿಂಗಳಿನಲ್ಲಿ ಸಾಲು ಸಾಲು ರಜೆ

ಹೆಣ್ಣು ಮಕ್ಕಳೇ ಇತ್ತ ಕಡೆ ಗಮನ ಕೊಡಿ.!! ನಿಮ್ಮ ಖಾತಗೆ ಇನ್ಮುಂದೆ 2000+1500 ರೂ.; ತಕ್ಷಣ ಈ ಕೆಲಸ ಮಾಡಿ

Leave a Comment