ಹಲೋ ಸ್ನೇಹಿತರೇ, ಕೃಷಿ ಭಾಗ್ಯ ಯೋಜನೆಯಡಿಯು ಸಹಾಯಧನದಡಿ ಒದಗಿಸಲಾಗುವ ಘಟಕಗಳು ಯಾವುದೇ ಕ್ಷೇತ್ರ ಬದುಗಳ ನಿರ್ಮಾಣ, ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಗಳ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಹಾಗೂ ಹೊಂಡದಿಂದ ನೀರು ಎತ್ತಲು ಡೀಸೆಲ್ ಅಥವಾ ಸೋಲಾರ್ ಪಂಪ್ಸೆಟ್ ಗಳು ನೀರನ್ನು ಬೆಳೆಗೆ ಹಾಯಿಸಲು ಹನಿ, ತುಂತುರು ನೀರಾವರಿ ಪರಿಕರಗಳ ವಿತರಣೆ ಮಾಡಲಾಗುತ್ತದೆ.
ರೈತರ ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್ ನಲ್ಲಿ ಕನಿಷ್ಠ 1 ಎಕರೆ ಇರಬೇಕು, ಇಲ್ಲವಾದಲ್ಲಿ ರೈತರ 1 ಎಕರೆ ಸಾಗುವಳಿ ಕ್ಷೇತ್ರವು ಒಂದಕ್ಕಿಂತ ಹೆಚ್ಚು ಸರ್ವೆ ನಂಬರ್ ನಲ್ಲಿ ಒಂದೇ ಪ್ರದೇಶದಲ್ಲಿ ಇರುಬೇಕು. ಇದು ಕನಿಷ್ಠ ಐದು ಎಕರೆ ಪ್ರದೇಶದಿಂದ ನೀರು ಶೇಖರಣೆಯಾಗುವಂತಿರಬೇಕು. ಈಗಾಗಲೇ ಈ ಯೋಜನೆಯನ್ನು, ಇತರೆ ಯೋಜನೆಗಳ ಅಡಿ ಕೃಷಿ ಹೊಂಡ ಫಲಾನುಭವಿಯಾಗಿರುವ ರೈತರುಗಳು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ.
ಫಲಾನುಭವಿಯು ಒಂದೇ ಇಲಾಖೆಯಿಂದ ಹಾಗೂ ಒಂದೇ ಯೋಜನೆಯಿಂದ ಸಹಾಯಧನವನ್ನು ಪಡೆಯುವುದನ್ನು ಖಾತ್ರಿ ಪಡಿಸಲು ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ಇತರೆ ಇಲಾಖೆಗಳಿಂದ ದೃಢೀಕರಣ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು.
ಇತರೆ ವಿಷಯಗಳು:
ಧರೆಗುರುಳಿದ ಎಲ್ಪಿಜಿ ಗ್ಯಾಸ್ ಬೆಲೆ.!! ಹಾಗಾದ್ರೆ ಇಂದಿನ ದರ ಎಷ್ಟು? ಸತ್ಯ ಬಟಾಬಯಲು
ಪ್ರತಿದಿನ 10,000 ಸಾವಿರ ಸಂಪಾದಿಸಿ ಕೇವಲ 850 ರೂ ನಿಂದ ಆರಂಭಿಸಿ : ಕಡಿಮೆ ಬಂಡವಾಳ ಹೆಚ್ಚು ಲಾಭ