rtgh

ಹೊಸ ರೇಷನ್ ಕಾರ್ಡ್ ವಿತರಣೆಗೆ ಡೇಟ್ ಫಿಕ್ಸ್.! ಪಡೆಯುವುದು ಹೇಗೆ?

ಹಲೋ ಸ್ನೇಹಿತರೇ, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇದ್ದ ಕಾರಣ ಇಲ್ಲಿಯವರೆಗೆ ಅರ್ಜಿ ಸಲ್ಲಿಸಿದ ಯಾರಿಗೂ ಪಡಿತರ ಚೀಟಿ ವಿತರಣೆ ಮಾಡಿರಲ್ಲಿಲ್ಲ ಈಗ ರಾಜ್ಯ ಸರಕಾರದಿಂದ ಹೊಸ ರ‍ೇಷನ್ ಕಾರ್ಡ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಕುರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ. ಎಚ್ ಮುನಿಯಪ್ಪನವರು ಹಂಚಿಕೊಂಡಿರುವ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

new ration cards

ಇನ್ನು 15 ದಿನದೊಳಗೆ ಹೊಸ ಪಡಿತರ ಚೀಟಿ:

ಈಗಾಗಲೇ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿ ಕಾಯುತ್ತಿರುವ ಫಲಾನುಭವಿಗಳಿಗೆ ಸರಕಾರ ಸಿಹಿ ಸುದ್ದಿ ನೀಡಿದ್ದು ,ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ದೊರೆಯಲಿದೆ.

ಈ ಕುರಿತು ಸರಕಾರದ ವಾರ್ತಾ ಇಲಾಖೆಯ ಎಕ್ಸ್ ಖಾತೆಯಲ್ಲಿ ಮಾಹಿತಿ ಪ್ರಕಟವಾಗಿದ್ದು‌, ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು ಇನ್ನು 15 ದಿನದ ಒಳಗಾಗಿ ಸಲ್ಲಿಕೆಯಾದ ಎಲ್ಲಾ ಅರ್ಜಿಗಳ ಪರಿಶೀಲಿಸಿ ಹೊಸ ರೇಷನ್ ಕಾರ್ಡ್‌ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ. ಎಚ್ ಮುನಿಯಪ್ಪನವರು ಹೇಳಿದಾರೆ.

ಇದನ್ನೂ ಸಹ ಓದಿ : ಕಾರ್ಮಿಕರ ಮನೆ ನಿರ್ಮಾಣಕ್ಕೆ ಸರ್ಕಾರದ ದುಡ್ಡು!! ಅರ್ಜಿ ಸಲ್ಲಿಸಿದ ತಕ್ಷಣ 1.50 ಲಕ್ಷ ರೂ. ನೇರ ನಿಮ್ಮ ಖಾತೆಗೆ

ಜಿಲ್ಲಾವಾರು ವಿತರಣೆಯಾಗದ ರೇಷನ್ ಕಾರ್ಡ್ ಪಟ್ಟಿ ನೋಡುವ ವಿಧಾನ:

ಆಹಾರ ಇಲಾಖೆಯ ವೆಬ್ಸೈಟ್ ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಆ ಜಿಲ್ಲೆಯಲ್ಲಿ ವಿತರಣೆಯಾದಗ ರೇಷನ್‌ ಕಾರ್ಡ್ ಪಟ್ಟಿಯನ್ನು ನೋಡಬಹುದು.


Step-1: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ Ration card list ಆಹಾರ ಇಲಾಖೆಯ ಜಾಲತಾಣ ಭೇಟಿ ಮಾಡಬೇಕು ಬಳಿಕ “ಇ-ಪಡಿತರ ಚೀಟಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ “ವಿತರಣೆಯಾದ ಹೊಸ ಪಡಿತರ ಚೀಟಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ಇದಾದ ಬಳಿಕ ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಆಯ್ಕೆ ಮಾಡಿಕೊಂಡು “GO/ಮುಂದೆ” ಬಟನ್ ಮೇಲೆ ಕ್ಲಿಕ್ ಮಾಡಿದರೆ ಇಲ್ಲಿಯವರೆಗೆ ವಿತರಣೆಯಾಗದೆ ಹಾಗೆಯೇ ಉಳಿದಿರುವ ಜಿಲ್ಲಾವಾರು ಪಡಿತರ ಚೀಟಿಯ ಪಟ್ಟಿ ತೋರಿಸುತ್ತದೆ.

ರೇಷನ್ ಕಾರ್ಡ್ ಅರ್ಜಿಯ ಸ್ಥಿತಿ ಚೆಕ್ ಮಾಡುವ ವಿಧಾನ:

ಈಗಾಗಲೇ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದವರು ಅಥವಾ ಹೊಸದಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವವರು ತಾವುಗಳು ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದ ಬಳಿಕ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಪರಿಶೀಲಿಸಬಹುದಾಗಿದೆ.

Step-1: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ New Ration card status ಆಹಾರ ಇಲಾಖೆಯ ಜಾಲತಾಣ ಭೇಟಿ ಮಾಡಬೇಕು ಬಳಿಕ “ಇ-ಸ್ಥಿತಿ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ “ಹೊಸ/ಹಾಲಿ ಪಡಿತರ ಚೀಟಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ಬಳಿಕ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಈ ಪೇಜ್ ನಲ್ಲಿ ಮೊದಲಿಗೆ ಕಾಣೂವ “ಹೊಸ ಪಡಿತರ ಚೀಟಿಗೆ ಸಲ್ಲಿಸಲಾದ ಅರ್ಜಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ಇದಾದ ಬಳಿಕ ಅರ್ಜಿ ಸಲ್ಲಿಸಿದ ಬಳಿಕ ನೀಡುವ Acknowledgment No ಅನ್ನು ಹಾಕಿ “Go’ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಚೆಕ್ ಮಾಡಹುವುದು.

ಇತರೆ ವಿಷಯಗಳು:

ಇನ್ಮುಂದೆ ಜಮೀನು, ಆಸ್ತಿ ಮಾರಾಟಕ್ಕೆ ಟಫ್‌ ರೂಲ್ಸ್;‌ ಯಾವುದು ಆ ನಿಯಮ ಗೊತ್ತಾ?

ಬ್ಯಾಂಕ್‌ ರಜೆ; ಜನವರಿಯಲ್ಲಿ 16 ದಿನ ಎಲ್ಲಾ ಬ್ಯಾಂಕ್‌ಗಳು ಕ್ಲೋಸ್.!‌ ಅಗತ್ಯ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ

ಕಾನ್ಸ್‌ಟೇಬಲ್ 9,739 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ,ಹೆಚ್ಚಿನ ಮಾಹಿತಿ ಇಲ್ಲಿದೆ

Leave a Comment