rtgh

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ

ಹಲೋ ಸ್ನೇಹಿತರೇ, ಬೆಂಗಳೂರಿನ ಎಲ್ಲ ಕಡೆಗಳಲ್ಲೂ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಶ್ರೀಲಂಕಾ ಕರಾವಳಿಯಿಂದ ತಮಿಳುನಾಡಿನ ಉತ್ತರ ಕರಾವಳಿ ಉದ್ದಕ್ಕೂ ಇರುವ ಮೇಲ್ಮೈ ಸುಳಿಗಾಳಿಯಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ. ಎಲ್ಲೇಲ್ಲಿ ಎಷ್ಟು ಮಳೆಯಾಗಲಿದೆ? ಸಂಪೂರ್ಣ ವಿವರವಾದ ಮಾಹಿತಿಗಾಗಿ ಕೊನೆವರೆಗೂ ಓದಿ..

rain alert in karnataka

ಹೌದು, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಜೊತೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು (ಮಂಗಳವಾರ) ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ವಿಜಯನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಲ್ಲದೇ ಈ ತಿಂಗಳು ವಾಡಿಕೆಗಿಂತ ಶೇ.70ರಷ್ಟು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ 7.3 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಸಹ ಓದಿ : KPSC ವಿವಿಧ ಇಲಾಖೆಯಿಂದ 1,900 ಹುದ್ದೆಗಳ ನೇಮಕಾತಿ.! ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?


ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ, ವಿಮಾನ ನಿಲ್ದಾಣ, ಮಾಣಿ, ಪಣಂಬೂರು, ತಾಳಗುಪ್ಪ, ಅಂಕೋಲಾ, ಕೊಪ್ಪದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನೂ ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನೂ ಕರಾವಳಿ ಭಾಗದಲ್ಲೂ ಸಹ ಹಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆ ಇದೆ. ಮಂಗಳೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇತರೆ ವಿಷಯಗಳು:

ಅಂತ್ಯೋದಯ ಕಾರ್ಡ್ ಇದ್ದವರಿಗೆ ಭರ್ಜರಿ ಆಫರ್! 2028 ರವರೆಗೆ ಸಿಲಿದೆ ಉಚಿತ ರೇಷನ್‌

ಕಾರ್ಮಿಕ ಕಾರ್ಡ್ ಇದ್ದವರಿಗೆ ಬಂಪರ್! ಕೇಂದ್ರ ಸರ್ಕಾರದಿಂದ ಈ ತಿಂಗಳ ಹಣ ಖಾತೆಗೆ

GST ನಿಯಮದಲ್ಲಿ ಹೊಸ ಬದಲಾವಣೆ.! ಈ ಸರಕು & ಸೇವೆಗಳಿಗೆ ಕಟ್ಟಬೇಕು ಹೆಚ್ಚುವರಿ ತೆರಿಗೆ

Leave a Comment