rtgh

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ.! ರಾಜ್ಯಾದ್ಯಂತ ಶೀತಗಾಳಿ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜ. 9ರ ವರೆಗು ಮಳೆ

ಹಲೋ ಸ್ನೇಹಿತರೇ, ರಾಜ್ಯಾದ್ಯಂತ ಶೀತಗಾಳಿ ಬೀಸುತ್ತಿದೆ, ಮಂಗಳವಾರ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು. ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನವರಿ 9ರ ವರೆಗು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಯಾವ ಯಾವ ಜಿಲ್ಲೆಯಲ್ಲಿ ಮಳೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

winter season karnataka

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ 5-6 ದಿನಗಳ ಕಾಲ ಮಳೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜ. 7 ರಿಂದ 9ರ ವರೆಗು 2 ದಿನಗಳ ಕಾಲ ಮಳೆಯ ಸಾಧ್ಯತೆ ಇದೆ.

ದಕ್ಷಿಣ ಒಳನಾಡು- ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಇಂದು & ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ,ವಿಜಯನಗರದಲ್ಲಿ ಜ. 6 ರಿಂದ 3 ದಿನಗಳ ಕಾಲ ಮಳೆ.

ರಾಜ್ಯಾದ್ಯಂತ ಮಂಗಳವಾರ ಒಣಹವೆ ಇತ್ತು. ವಿಜಯಪುರದಲ್ಲಿ 11.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ಬೆಂಗಳೂರಿನಲ್ಲಿ ಶೀತಗಾಳಿಯಿದ್ದು, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


ಎಚ್​ಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರು: 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಶಿವಮೊಗ್ಗ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಬೆಳಗಾವಿ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ , 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಮೈಸೂರು: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡ್ತಿರೋ ರೈತರಿಗೆ ಬಿಗ್‌ ಶಾಕ್! ಸರ್ಕಾರದಿಂದ ಕ್ರಮ

ದೇಶದ ಲಕ್ಷ ಲಕ್ಷ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಮೋದಿ ಸರ್ಕಾರದಿಂದ ಬಂಪರ್ ಉಡುಗೊರೆ

Leave a Comment