ಹಲೋ ಸ್ನೇಹಿತರೇ, ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು. ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ದೇಶದ ಅನೇಕ ದೇವಾಲಯಗಳಲ್ಲಿ ಭಾರತೀಯ ಉಡುಪುಗಳನ್ನು ಧರಿಸಿ ಬರುವವರಿಗೆ ಮಾತ್ರ ದೇವರ ದರ್ಶನ ಮಾಡುವ ಅವಕಾಶ ಕಲ್ಪಿಸಲಾಗುತ್ತಿದೆ.
ಹೌದು, ಇಂದಿನಿಂದ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ದೊರೆಯಲಿದ್ದು, ಈ ಮೂಲಕ ದೇಗುಲಗಳಿಗೆ ಅರೆಬರೆ ಬಟ್ಟೆ ಧರಿಸಿ ಬರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ. ಅರೆಬರೆ ಉಡುಪು ಧರಿಸದೇ ಭಾರತೀಯ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಾಲಯದೊಳಗೆ ಪ್ರವೇಶ ನೀಡಲಾಗುತ್ತದೆ. ಇಂದು ಬೆಳಿಗ್ಗೆ 11 ಗಂಟೆಯ ವೇಳೆಗೆ ವಸಂತನಗರದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದಲ್ಲಿ ಈ ವಸ್ತ್ರ ಸಂಹಿತೆ ಬೋರ್ಡ್ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ.
ರೈತರಿಗೆ ಸೋಲಾರ್ ಪಂಪ್‌ಗಳ ಮೇಲೆ 90% ಸಬ್ಸಿಡಿ ಕೊಡುಗೆ! ಇಂದೇ ಅಪ್ಲೇ ಮಾಡಿ
ಮುಜರಾಯಿ ಇಲಾಖೆಯು ಈ ಬಗ್ಗೆ ಯಾವುದೇ ಆದೇಶ ಹೊರಡಿಸಿಲ್ಲ, ಆದರೆ ಆಯಾಯ ದೇವಸ್ಥಾನದ ಆಚಾರಸಂಹಿತೆಗಳಿಗೆ ಅನುಗುಣವಾಗಿ ನಿಯಮಗಳನ್ನು ಪಾಲಿಸಲಾಗುತ್ತಿದೆ. ದೇವಾಲಯಕ್ಕೆ ಚಡ್ಡಿ, ಬರ್ಮುಡಾ, ಹರಿದ ಜೀನ್ಸ್, ಎದೆ ಕಾಣುವ ಟಿಶರ್ಟ್ ಧರಿಸಿಕೊಂಡು ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳು ಬರುವಂತಿಲ್ಲ ಮತ್ತು ಮಹಿಳೆಯರು ಸ್ಕರ್ಟ್, ಮಿಡಿ, ಹರಿದ ಜೀನ್ಸ್, ಸಣ್ಣ ಪುಟ್ಟ ಬಟ್ಟೆಗಳು, ಶಾರ್ಟ್ಸ್ ಹಾಕಿಕೊಂಡು ಬಂದರೆ ದೇವಸ್ಥಾನಕ್ಕೆ ಎಂಟ್ರಿ ಇರೋಲ್ಲ. ದಕ್ಷಿಣ ಕನ್ನಡ-ಉಡುಪಿಯ ಕೆಲವು ದೇವಾಲಯಗಳಲ್ಲಿ ಪುರುಷರುಗಳು ಅಂಗಿ ಧರಿಸಿ ದೇವಾಲಯದ ಒಳಗ ಹೋಗುವಂತಿಲ್ಲ ಮತ್ತು ಅಂಗಿ ಮತ್ತು ಬನಿಯನ್ ಕಳಚಿಟ್ಟುಕೊಂಡು ದೇವಾಲಯವನ್ನು ಪ್ರವೇಶಿಸಬೇಕು.
ಇತರೆ ವಿಷಯಗಳು:
ಅಂತ್ಯೋದಯ ಕಾರ್ಡ್ ಇದ್ದವರಿಗೆ ಭರ್ಜರಿ ಆಫರ್! 2028 ರವರೆಗೆ ಸಿಲಿದೆ ಉಚಿತ ರೇಷನ್
ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್! ಪ್ರತಿ ತಿಂಗಳು ನಿಮ್ಮ ಖಾತೆಗೆ ಸೇರುತ್ತೆ 20,500 ರೂ. ಪಿಂಚಣಿ