rtgh

ಯುವನಿಧಿಗೆ ಈವರೆಗೆ 32,000 ಅರ್ಜಿ ಸಲ್ಲಿಕೆ.! ಇಂದು ಈ ಜಿಲ್ಲೆಯಲ್ಲಿ ಚಾಲನೆ.! ಅರ್ಹ ನಿರುದ್ಯೋಗಿ ಖಾತೆಗೆ ಬೀಳುತ್ತೆ1500, 3000 ರೂ

ಹಲೋ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ 5 ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಗೆ. ಈವರೆಗೆ 32,000 ಅರ್ಜಿ ಸಲ್ಲಿಕೆಯಾಗಿದ್ದು ಇಂದು ಕೂಡ ಒಂದು ಜಿಲ್ಲೆಯಲ್ಲಿ ಚಾಲನೆಯಾಗಲಿದೆ ಅದು ಯಾವ ಜಿಲ್ಲೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

yuva nidhi scheme launched

ಇಂದು ಶಿವಮೊಗ್ಗ ನಗರದಲ್ಲಿ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರೀಡಂ ಪಾರ್ಕ್​ನಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು, 85,000 ಅಧಿಕ ಮಂದಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ಇಂದು ಜ. 12 ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ಷಕಾಂಕ್ಷೆಯ 5 ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗುವುದು. ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಸಿಎಂ ಹಾಗೂ ಡಿಸಿಎಂ  ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಶುರುವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ & ಹಾವೇರಿ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ 1 ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದು.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಬರುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕೆರೆತರಲು ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಒಡೆತನದ ಬಸ್ ಮತ್ತು ಇತರೆ ವಾಹನಗಳ ಸೌಲಭ್ಯವನ್ನು ನಿಯೋಜಿಸಲಾಗಿದೆ. ಪ್ರತಿ ಬಸ್​ಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ೭ ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.


ಈ ಕಾರ್ಯಕದಲ್ಲಿ ಶಿವಮೊಗ್ಗ ಜಿಲ್ಲೆಯ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್​​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ & ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಗಳು ಇದೆ.

ಇದನ್ನೂ ಓದಿ:Amazon Great Republic Day sale 2024: ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಮೇಲೆ 80% ವರೆಗೂ ರಿಯಾಯಿತಿ

ಏನಿದು ಯುವನಿಧಿ ಯೋಜನೆ?

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದ್ದು. ಈಗಾಗಲೇ 4 ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದ್ದು. ಇದೀಗ 5 ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಸಿಗತ್ತದೆ.

ಪದವೀಧರರಿಗೆ ಪ್ರತಿ ತಿಂಗಳು 3000 ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ನೀಡಲಾಗುವುದು. ಈ ಉದ್ಯೋಗಭತ್ಯೆಯನ್ನು 2 ವರ್ಷಗಳ ವರೆಗೆ ಮಾತ್ರ ನೀಡಲಾಗುತ್ತದೆ. 2 ವರ್ಷಕ್ಕೂ ಮುನ್ನ ಫಲಾನುಭವಿಗೆ ಉದ್ಯೋಗ ಸಿಕ್ಕಲ್ಲಿ ಯೋಜನೆಯಡಿ ಬರುವ ಹಣ ನಿಲ್ಲಿಸಲಾಗುವುದು.

ನೋಂದಣಿ ಮಾಡುವುದು ಹೇಗೆ?

ಅರ್ಜಿ ಸಲ್ಲಿಸುವವರು ಕರ್ನಾಟಕದಲ್ಲಿ ವಾಸಿಸುತ್ತಿರಬೇಕು. 2023ರಲ್ಲಿ ಪದವಿ / ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ನೋಂದಾಯಿಸಿದ ದಿನದಿಂದ ಹುದ್ದೆ ಸಿಗುವವರೆಗೂ / 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗುತ್ತದೆ.

ಅರ್ಜಿ ಸಲ್ಲಿಸಲು aadhar card, ಬ್ಯಾಂಕ್ ಪಾಸ್ಬುಕ್, SSLC marks card, PUC marks card, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳು ಮತ್ತು ಸೇವಾಸಿಂಧು ಪೋರ್ಟಲ್​ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಗೆ ಇವರು ಅರ್ಹರಲ್ಲ

ಉನ್ನತ ಶಿಕ್ಷಣಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಈ ಯೋಜನೆ ಸಿಗುವುದಿಲ್ಲ. ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸಲ್ಲಾ. ಸರ್ಕಾರಿ /ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಅನ್ವಯ ಆಗುವುದಿಲ್ಲ.

ನುಡಿದಂತೆ ನಡೆಯುವ ಸರ್ಕಾರ ವಿಧಾನಸಭಾ ಚುನಾವಣೆಗೂ ಮುನ್ನಾ ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ, ದೇಶದ ಎಲ್ಲಾ ಜನತೆಯು ಕರ್ನಾಟಕ ಮಾದರಿಯ ಆಡಳಿತವನ್ನು ಎದುರು ನೋಡುತ್ತಿದ್ದಾರೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ರವರು ಹೇಳಿದ್ದಾರೆ.

ಮೋದಿ ಸರ್ಕಾರದ ದೊಡ್ಡ ಉಡುಗೊರೆ.!! ಪ್ರತಿ ರೈತರ ಖಾತೆಗೆ ಕನಿಷ್ಠ 30 ಸಾವಿರ ಜಮಾ; ಅಪ್ಲೇ ಮಾಡಿದವರಿಗೆ ಮಾತ್ರ

ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಬರ ಪರಿಹಾರ! ನಿಮ್ಮ ಹೆಸರಿದಿಯಾ ಕೂಡಲೇ ಚೆಕ್ ಮಾಡಿ

Leave a Comment